ಕಾರವಾರ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ (Uttara Kannada) ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ಈ ಘಟನೆ ನಡೆದಿದೆ. ಖಾಸಗಿ ಬಸ್ ನಲ್ಲಿ 25 ಜನ ಪ್ರಯಾಣಿಕರು ಗೋವಾಕ್ಕೆ ತೆರಳುತ್ತಿದ್ದರು. ಈ ವೇಳೆ ಅರೆಬೈಲ್ ಘಟ್ಟದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಲಾರಿಗೆ ಡಿಕ್ಕಿಯಾಗಿದೆ. ಬಸ್ ನಲ್ಲಿದ್ದ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.