ಬೆಂಗಳೂರು: ಬಿಎಂಟಿಸಿ ಬಸ್ (BMTC Bus) ಬಸ್ ವೊಂದು ಮೆಟ್ರೋ ಪಿಲ್ಲರ್ ಗೆ ಡಿಕ್ಕಿಯಾದ ಪರಿಣಾಮ 12 ಜನ ಗಾಯಗೊಂಡಿರುವ ಘಟನೆ ನಡೆದಿತ್ತು. ಸದ್ಯ ಗಾಯಗೊಂಡವರ ಪೈಕಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಪಿಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ (Namma Metro ) ಪಿಲ್ಲರ್‌ಗೆ ಬಸ್ ಡಿಕ್ಕಿಯಾಗಿತ್ತು. ಘಟನೆಯಲ್ಲಿ ಗಾಯಗೊಂಡಿದ್ದ ಬಿಡದಿ ಮೂಲದ ಜಯರಾಮ್ (57) ಸಾವನ್ನಪ್ಪಿದ್ದಾರೆ. ಶುಕ್ರವಾರ ಕೆಂಗೇರಿಯ ಮೈಲಸಂದ್ರದ ಬಳಿ ಮೆಟ್ರೋ ಪಿಲ್ಲರ್‌ಗೆ ಬಸ್ ಡಿಕ್ಕಿಯಾಗಿತ್ತು. ಚಾಲಕ, ನಿರ್ವಾಹಕ ಸೇರಿದಂತೆ 12 ಜನ ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಕುರಿತು ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.