ಹಾಸನ : ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟಿದ್ದ ಮದುವೆ ದಿಬ್ಬಣದ ಬಸ್ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬಿಸಿಲೆಘಾಟ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಪಲ್ಟಿಯಾದ ಪರಿಣಾಮ 22 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಬಸ್ ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಗಾಯಾಳುಗಳಲ್ಲಿ ಕೆಲವರನ್ನು ಸಕಲೇಶಪುರ ತಾಲೂಕು ಅಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕೆಲವರನ್ನು ಸುಮಾರು 8 ಅಂಬ್ಯುಲೆನ್ಸ್‌ನ ಮೂಲಕ ಮಂಗಳೂರು ಮತ್ತು ಸುತ್ತಮುತ್ತಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು | ಕೋಟಿ ಕೋಟಿ ಆಸ್ತಿ ಬರೆದುಕೊಟ್ಟು ಮಗಳಂತೆ ಸಾಕಿದ್ದ ಮನೆಗೆ ಕನ್ನ ಹಾಕಿದ ಯುವತಿ ಅರೆಸ್ಟ್!



















