ಮಂಡ್ಯ : ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಟೋಲ್ ಬಳಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹೈವೇಯಲ್ಲಿ ಅಳವಡಿಸಲಾಗಿದ್ದ ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬರುತ್ತಿದ್ದ ಬಸ್ ರಭಸವಾಗಿ ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಅಪಘಾತದ ವೇಳೆ ಬಸ್‌ನಲ್ಲಿದ್ದ ಬೆಂಗಳೂರಿನ ನಿವಾಸಿ ಕಸ್ತೂರಿ ಶಾನ್ ಬಾಗ್ (64) ಹಾಗೂ ಬಸ್ ಕ್ಲೀನರ್ ಅಶೋಕ್ (25) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಬೆಳ್ಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಬ್ರಹ್ಮಾವರದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ ; ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!



















