ಮಂಡ್ಯ: ಬಸ್ ಪಲ್ಟಿಯಾದ(Bus Overturn) ಪರಿಣಾಮ 30ಕ್ಕೂ ಅಧಿಕ ಜನ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚಾಮರಾಜನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ (KSRTC Bus) ಮದ್ದೂರಿನ ರುದ್ರಾಕ್ಷಿಪುರದ ಹತ್ತಿರ ಪಲ್ಟಿಯಾಗಿದೆ. ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ.
ಸೋಮವಾರ ಬೆಳಗಿನ ಜಾವ ಈ ಘಟನೆ ನಡೆದಿದೆ. ಬಸ್ ಚಲಿಸುತ್ತಿದ್ದ ವೇಳೆ ಚಾಲಕ ಅಚಾನಕ್ಕಾಗಿ ಹಿಂಬದಿ ತಿರುಗಿ ನೋಡಿದ್ದು, ಈ ವೇಳೆ ಚಕ್ರ ಡಿವೈಡರ್ ಮೇಲೆ ಹತ್ತಿದೆ. ಹೀಗಾಗಿ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿದ್ದವರು ಗಾಯಗೊಂಡಿದ್ದಾರೆ.
ಗಾಯಗೊಂಡಿರುವ ಪ್ರಯಾಣಿಕರಿಗೆ ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಧಿಕಾರಿ ಡಾ. ಕುಮಾರ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಂದು ವೇಳೆ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೆ, ಅದರ ಖರ್ಚು ವೆಚ್ಚವನ್ನು ಕೆಎಸ್‌ಆರ್‌ಟಿಸಿ ವತಿಯಿಂದ ಭರಿಸುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದ್ದಾರೆ.