ಲಕ್ನೋ : ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಆಗ್ರಾ ಎಕ್ಸ್ಪ್ರೆಸ್ ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಮಾಹಿತಿಗಳ ಪ್ರಕಾರ, ಅರೌಲಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಬಸ್ ಇದ್ದಕ್ಕಿದ್ದಂತೆ ಸಮತೋಲನ ಕಳೆದುಕೊಂಡು ಪಲ್ಟಿಯಾಗಿದ್ದು, ಹಲವಾರು ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿವೆ.
ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಕಾನ್ಪುರಕ್ಕೆ ಸ್ಥಳಾಂತರಿಸಲಾಯಿತು. ದೆಹಲಿಯಿಂದ ಬಿಹಾರಕ್ಕೆ ಪ್ರಯಾಣಿಸುತ್ತಿದ್ದಾಗ ಬಸ್ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗಿನ ಜಾವ ಈ ಅಪಘಾತ ಸಂಭವಿಸಿದ್ದು, ಆ ಸಮಯದಲ್ಲಿ ಅನೇಕ ಪ್ರಯಾಣಿಕರು ನಿದ್ರೆಯಲ್ಲಿದ್ದರು.
ಇದನ್ನೂ ಓದಿ : ದೆಹಲಿಯ ಕೆಳ ನ್ಯಾಯಾಲಯ, CRPF ಶಾಲೆಗಳಿಗೆ ಬಾಂಬ್ ಬೆದರಿಕೆ!


















