ಕೊಪ್ಪಳ: ತಾಲೂಕಿನ ಬಸಾಪುರ ದಿಬ್ಬದ ಬಳಿ ಖಾಸಗಿ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದೆ. ಬೆಂಗಳೂರಿನಿಂದ ಹನುಮಸಾಗರಕ್ಕೆ ಹೊರಟಿದ್ದ ಬಸ್ನಲ್ಲಿ 15 ಜನರಿದ್ದರು. ಅಗಳಕೇರಿಯಿಂದ ಕಲ್ಲು ಕಂಬಗಳನ್ನು ಹೇರಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ಗೆ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಕಂದಕಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ ಬಸ್ ಮತ್ತು ಟ್ರ್ಯಾಕ್ಟರ್ ಎರಡೂ ಜಖಂಗೊಂಡಿವೆ.
ಘಟನೆಯಲ್ಲಿ 10 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಸ್ಥಳಕ್ಕೆ ಕೊಪ್ಪಳ ಎಸ್ಪಿ ಸಾಹಿಲ್ ಬಾಗ್ಲಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


















