ಬೆಂಗಳೂರು: ವೇತನ ಹೆಚ್ಚಳ ಮಾಡದ ಸರ್ಕಾರದ ಮೇಲೆ ನೌಕರಸ್ಥರು ಆಕ್ರೋಶಗೊಂಡು ಬಸ್ ನಿಲ್ಲಿಸಿ ಮುಷ್ಕರ ಹೂಡಲು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ.
ಕಳೆದ 6 ತಿಂಗಳಿಂದ ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಮೀನಾಮೇಷ ಎಣಿಸಲಾಗುತ್ತಿದೆ. ಹೀಗಾಗಿ ಮತ್ತೆ ಹೋರಾಟಕ್ಕೆ 1.10 ಲಕ್ಷ ಜನ ಸಾರಿಗೆ ನೌಕರರು ಹೋರಾಟಕ್ಕೆ ಸಿದ್ಧವಾಗಿದ್ದಾರೆ. ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ನಿಲ್ಲಿಸಿ ಮುಷ್ಕರಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ವರ್ಷ ಡಿ. 31ರಂದು ನೌಕರಸ್ಥರು ಮುಷ್ಕರಕ್ಕೆ ಕರೆ ನೀಡಿದ್ದರು. ಆ ವೇಳೆ ಸಂಧಾನ ಸಭೆ ನಡೆಸಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಇಲ್ಲಿಯವರೆಗೂ ನೌಕರರ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ಮತ್ತೊಮ್ಮೆ ಉಗ್ರ ಹೋರಾಟ ನಡೆಸಲು ಉಗ್ರರು ಕರೆ ನೀಡಲು ಮುಂದಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಮುಖಂಡ ಅನಂತ ಸುಬ್ಬರಾಬ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಹಲವು ಸಾರಿಗೆ ನೌಕರರ ಮುಖಂಡರು ಭಾಗಿಯಾಗಿದ್ದರು. ಸಭೆಯಲ್ಲಿ ಮುಷ್ಕರ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಶೇ. 25ರಷ್ಟು ವೇತನ ಹೆಚ್ಚಳಕ್ಕೆ ನೌಕರರು ಪಟ್ಟು ಹಿಡಿದಿದ್ದಾರೆ. ಆದರೆ, ನೌಕರರ ಜೊತೆ ಮಾತುಕತೆ ನಡೆಸಿ ವೇತನ ಪರಿಷ್ಕರಣೆಗೆ ಸರ್ಕಾರ ಹಿಂದೇಟು ಹಾಕುತ್ತಿದೆ. ವೇತನ ಹೆಚ್ಚಳ ಮಾಡದ ಸರ್ಕಾರ ವಿರುದ್ದ ಬೀದಿಗಿಳಿಯಲು ನೌಕರರು ಕೂಡ ಪ್ಲಾನ್ ಮಾಡಿದ್ದಾರೆ. ಹೀಗಾಗಿ ಬಿಎಂಟಿಸಿ, ಕೆಎಸ್ಆರ್ ಟಿಸಿ, ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ನೌಕರರು ಮುಷ್ಕರದ ಅಸ್ತ್ರ ಹೂಡಿದ್ದಾರೆ.