ಬೆಂಗಳೂರು : ನೀವೇನಾದರೂ ಬಾಗಲಕೋಟೆ ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಲು ಬಯಸುತ್ತಿದ್ದರೆ ಗುಡ್ ನ್ಯೂಸ್ ಇಲ್ಲಿದೆ. ಬಾಗಲಕೋಟೆಯ ಪ್ರಸಿದ್ಧ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ (BVV Sangha Bagalkot Recruitment 2026) ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು, ಉಪನ್ಯಾಸಕರು ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿಯ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ, ಬಾಗಲಕೋಟೆ
ಹುದ್ದೆಗಳ ಸಂಖ್ಯೆಪ: ವಿವಿಧ
ಹುದ್ದೆಗಳ ಹೆಸರು: ಪ್ರಾಂಶುಪಾಲರು, ಉಪನ್ಯಾಸಕರು ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಉದ್ಯೋಗ ಸ್ಥಳ: ಬಾಗಲಕೋಟೆ, ಮುಧೋಳ, ರಾಮದುರ್ಗ, ಹುನಗುಂದ, ಬೀಳಗಿ
ಬಾಗಲಕೋಟೆ ಜಿಲ್ಲೆಯಲ್ಲಿ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಶಾಲೆ-ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರು ಹಾಗೂ ಎಸ್ ಡಿಎ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಎಂಎ, ಎಂಎಸ್ಸಿ, ಎಂ ಕಾಮ್, ಬಿ.ಎ, ಬಿ.ಎಸ್ಸಿ, ಬಿ.ಕಾಮ್, ಬಿವಿಎ, ಡಿಪ್ಲೋಮಾ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಸಂಘದ ನಿಯಮಾವಳಿಯ ಪ್ರಕಾರ ವೇತನ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು-ಕಾರ್ಯಾಧ್ಯಕ್ಷರು, ಶ್ರೀ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ, ಬಾಗಲಕೋಟೆ, 587101 ವಿಳಾಸಕ್ಕೆ ಅರ್ಜಿಗಳನ್ನು ಸಲ್ಲಿಸಬೇಕು. ಹಾಗೆಯೇ, ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ chairmanhscom@gmail.com ಗೆ ಕಳುಹಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್



















