ಬಾಗಲಕೋಟೆ : ಹೆಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದಾರೆ. ಆ ಮೂಲಕ ಕ್ಷೇತ್ರವನ್ನು ಮರಳಿ ಕಾಂಗ್ರೆಸ್ ತನ್ನ ತೆಕ್ಕೆಗೆ ಪಡೆದುಕೊಂಡಿದೆ. ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ಚರಂತಿಮಠ ಪೈಪೋಟಿ ನೀಡಿದ್ದರಾದರೂ ಅಂತಿಮವಾಗಿ ಸೋಲು ಕಂಡಿದ್ದಾರೆ.

ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಸಂಭ್ರಮಾಚರಣೆ ನಡೆಸಿದ್ದು, ಕಾಂಗ್ರೆಸ್ ಬಾವುಟಗಳನ್ನು ಹಿಡಿದು, ಜೈಕಾರಗಳನ್ನು ಕೂಗಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿ ಅವರ ಭಾವ ಚಿತ್ರ ಹಿಡಿದು ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸತತ ಹಿನ್ನಡೆ ಅನುಭವಿಸಿ ಸೋಲು ಕಂಡಿದ್ದಾರೆ.
20ನೇ ಸುತ್ತಿನಲ್ಲಿ ಉಮೇಶ್ ಮೇಟಿ 16,471 ಮತಗಳಿಂದ ಮುನ್ನಡೆ
- ಉಮೇಶ್ ಮೇಟಿ -78,482
- ವೀರಣ್ಣ ಚರಂತಿಮಠ- 63.607
ಇದನ್ನೂ ಓದಿ : ಕೇಸರಿ ಪಾಳಯದಲ್ಲಿ ಸಂಭ್ರಮ : ಸಂಜೆ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಭೇಟಿ, ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ!


















