ಇಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಧಿಕಾರಾವಧಿ ಅಂತ್ಯಗೊಂಡಿದೆ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮೂರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿವೆ. ಇದರ ಮಧ್ಯೆ ದೀಪಾವಳಿ ಹಬ್ಬದ ಬಳಿಕ ವಿಜಯೇಂದ್ರ ಅವರು ದೆಹಲಿಗೆ ತೆರಳುವ ಸಾಧ್ಯತೆಯಿದೆ. ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬಿವೈವಿ ಹೈಕಮಾಂಡ್ ನಾಯಕರ ಭೇಟಿಗೆ ಮುಂದಾಗಿದ್ದಾರೆ. ರಾಜ್ಯಾಧ್ಯಕ್ಷರಾಗಿ ಮುಂದುವರೆಯುವ ಬಗ್ಗೆ ಅವರು ವರಿಷ್ಠರ ಜೊತೆ ಚರ್ಚಿಸುವ ಸಾಧ್ಯತೆಯಿದೆ.
ಈಗಾಗಲೇ ಹೊಸ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೋಮಣ್ಣ ಮತ್ತು ಮುರುಗೇಶ್ ನಿರಾಣಿ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ. ಅದರಿಂದ ತಮ್ಮನ್ನೇ ರಾಜ್ಯಾಧ್ಯಕ್ಷರಾಗಿ ಮುಂದುವರೆಸಿ ಎಂದು ಬಿವೈವಿ ವರಿಷ್ಠರ ಬಳಿ ಮನವಿ ಮಾಡುವ ಸಾಧ್ಯತೆಯಿದೆ. ಅದೇ ರೀತಿ ಸ್ಥಳೀಯ ಹಾಗೂ ಬಿಬಿಎಂಪಿ ಚುನಾವಣೆಗಳ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆಯಿದೆ. ಉಪಚುನಾವಣೆ ಮತ್ತು ಅಭ್ಯರ್ಥಿ ಆಯ್ಕೆ ಬಗ್ಗೆಯೂ ಮಾತುಕತೆ ನಡೆಸುವ ಸಾಧ್ಯತೆಯಿದೆ. ಹಿರಿಯೂರು ಅಭ್ಯರ್ಥಿ ಕುರಿತು ಬಿಜೆಪಿ ಹಾಗೂ ಜೆಡಿಎಸ್ ನಡುವೆ ಆಯ್ಕೆಯ ಜಟಾಪಟಿ ನಡೆಯುತ್ತಿದೆ. ಹಿರಿಯೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸುವ ಬಗ್ಗೆ ವರಿಷ್ಠರ ಜೊತೆ ಚರ್ಚಿಸುವ ಸಾಧ್ಯತೆಯಿದೆ. ಅದೇ ರೀತಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಂದಿನ ಹೋರಾಟ ರೂಪಿಸುವ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆಯಿದೆ.

















