ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಬ್ಯಾಟರಾಯನಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ (Byatarayanapur Primary Agricultural Cooperative Society Recruitment 2026) ಖಾಲಿ ಇರುವ ಅಕೌಂಟಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿವಿಧ ಅಕೌಂಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬ್ಯಾಟರಾಯನಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ
ಹುದ್ದೆ ಹೆಸರು: ಅಕೌಂಟಂಟ್
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 15
ಅಕೌಂಟಂಟ್ ಹಾಗೂ ಸಹಾಯಕ ಗೋದಾಮು ಪಾಲಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಕಾಂ ಪದವಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 21 ಸಾವಿರ ರೂ. ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cooperatives.gov.in ಗೆ ಭೇಟಿ ನೀಡಬೇಕು
ಅಕೌಂಟಂಟ್ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು
ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
ಬ್ಯಾಟರಾಯನಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ
ಬ್ಯಾಟರಾಯನಪುರ, ಬಿಬಿ ರಸ್ತೆ ಬೆಂಗಳೂರು-560092
ಇದನ್ನೂ ಓದಿ : ಹಾವೇರಿಯಲ್ಲಿ ಗಾಂಧಿ ಪುತ್ಥಳಿ ಧ್ವಂಸ ಮಾಡಿದ ದುಷ್ಕರ್ಮಿಗಳು!


















