ಬೈಂದೂರು/ಉಡುಪಿ : ‘ಮುಳ್ಳಿಕಟ್ಟೆಯಿಂದ ತ್ರಾಸಿ ಮರವಂತೆ ಬೀಚ್ ನಲ್ಲಿ ಹಮ್ಮಿಕೊಂಡು ಯಶಸ್ವಿಯಾಗಿದೆ ಹಾಗೂ ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಮನೆಮನಗಳಲ್ಲಿ ಹರ್ ಘರ್ ತಿರಂಗ ಅಭಿಯಾನ ನಡೆಯುತ್ತದೆ. ದೇಶದೆಲ್ಲೆಡೆ ನಡೆಯುತ್ತಿರುವ ತಿರಂಗ ಯಾತ್ರೆಯು ಗಮನ ಸೆಳೆಯುತ್ತಿದೆ. ಸ್ವಾತಂತ್ರ್ಯ ಆಚರಣೆಯ ಪರಿಕಲ್ಪನೆಯನ್ನು ಮತ್ತಷ್ಟು ಆಪ್ತವಾಗಿಸಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದ್ದಾರೆ.
‘ಮುಳ್ಳಿಕಟ್ಟೆಯಿಂದ ಮರವಂತೆ ಬೀಚ್ ವರೆಗೆ ಯುವಮೋರ್ಚಾ ನೇತೃತ್ವದಲ್ಲಿ ನಡೆದ ತಿರಂಗ ಬೃಹತ್ ಬೈಕ್ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಅಧ್ಯಕ್ಷ ಗಜೇಂದ್ರ ಎಸ್ ಬೇಲೆಮನೆ ಮಾತನಾಡಿ, ಮುಳ್ಳಿಕಟ್ಟೆಯಿಂದ ತ್ರಾಸಿ ಮರವಂತೆ ಬೀಚ್ ನಲ್ಲಿ ಹಮ್ಮಿಕೊಂಡು ತಿರಂಗ ಯಾತ್ರೆ ಬೃಹತ್ ಬೈಕ್ ರ್ಯಾಲಿ ಹಲವಾರು ಜನ ಭಾಗವಹಿಸಿದ ಕಾರ್ಯಕರ್ತರಿಗೆ, ಸಾರ್ವಜನಿಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ವೇಳೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಿವೃತ್ತ ಸೈನಿಕರಿಗೆ ಸನ್ಮಾನಿಸಲಾಯಿತು.
ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷೆ ಅನಿತಾ ಆರ್ ಕೆ, ಉಡುಪಿ ಜಿಲ್ಲಾ ಉಪಾಧ್ಯಕ್ಷ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಬಿಲ್ಲಾಡಿ ಪ್ರಥ್ವಿರಾಜ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ಬಿಜೂರ, ಮಂಡಲದ ಪ್ರಧಾನ ಕಾರ್ಯದರ್ಶಿ ಕರಣ ಪೂಜಾರಿ, ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ದೇವಾಡಿಗ, ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಖಾರ್ವಿ, ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳು, ಶಕ್ತಿಕೇಂದ್ರದ ಪ್ರಮುಖರು, ಕಾರ್ಯಕರ್ತರು, ಯುವಮೋರ್ಚಾದ ಎಲ್ಲಾ ಪದಾಧಿಕಾರಿಗಳು ಮತ್ತು ನೂರಾರು ದೇಶಭಕ್ತರು ಉಪಸ್ಥಿತರಿದ್ದರು.
ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಶ್ ನಾವುಂದ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.