ಉಡುಪಿ/ಬೈಂದೂರು : ಕರ್ನಾಟಕ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿರುವ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ವಿಧಾನಸಭಾ ಸಮಿತಿಯ ಮೂಲಕ ಅಮೇರಿಕಾದ ಬೋಸ್ಟನ್‌ನಲ್ಲಿ ನಡೆಯುವ ಅಧ್ಯಯನ ಪ್ರವಾಸಕ್ಕೆ ಅವಕಾಶ ಪಡೆದಿದ್ದಾರೆ.
ರಾಜ್ಯ ಶಾಸಕರ ರಾಷ್ಟ್ರೀಯ ಸಮಾವೇಶ ಹಾಗೂ ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಗಳ ಅಡಿಯಲ್ಲಿ ಅಮೇರಿಕಾದ ಬೋಸ್ಟನ್ ನಗರದಲ್ಲಿ ʼಶಾಸಕಾಂಗ ಶೃಂಗಸಭೆ 2025ʼ ನಡೆಯಲಿದ್ದು, ಈ ಶೃಂಗ ಸಭೆಯಲ್ಲಿ ಭಾರತದ ಸಂಸದರು, ವಿವಿಧ ರಾಜ್ಯಗಳ ವಿಧಾನ ಸಭಾ ಸದಸ್ಯರು, ವಿಧಾನ ಪರಿಷತ್ತಿನ ಸದಸ್ಯರು, ಸಚಿವರುಗಳು, ರಾಜಕೀಯ ತಜ್ಞರು, ನೀತಿ ನಿರೂಪಕರು ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ.



















