ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಸೇನಾಪುರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಗಂಗೋಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮೃತದೆಹವು ನಾಡ ಗ್ರಾಮದ ನಿವಾಸಿ ಗಣೇಶ್ ಭಂಡಾರಿ ಅವರ ಪುತ್ರ ಶಶಾಂಕ್ ಭಂಡಾರಿ(29) ಅವರದ್ದು ಎಂದು ಗುರುತಿಸಲಾಗಿದೆ. ಪದವಿ ಮುಗಿಸಿ ವರ್ಕ್ ಫ್ರಮ್ ಹೋಮ್ ಕೆಲಸ ಮಾಡುತ್ತಿದ್ದ ಶಶಾಂಕ್ ಜುಲೈ 5 ರ ಬೆಳಿಗ್ಗೆ ನಾಪತ್ತೆಯಾಗಿದ್ದು ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.