ಕೊಡಗು: ಇಂದು ಕೊಡಗು ಬಂದ್ ಗೆ ಕರೆ ನೀಡಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ (KM Cariappa) ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ (KS Thimayya) ಅವರಿಗೆ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಬಂದ್ ಗೆ ಕರೆ ನೀಡಲಾಗಿದೆ.
ಅಲ್ಲದೇ, ಕಿಡಿಗೇಡಿಗಳನ್ನು ಗಡಿಪಾರು ಮಾಡುವಂತೆ ಆಗ್ರಹಿಸಲಾಗಿದ್ದು, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ನ್ಯಾಯವಾದಿ ವಿದ್ಯಾಧರ್ ಎಂಬ ವ್ಯಕ್ತಿ ಸೇನಾನಿಗಳಿಗೆ ಅವಮಾನ ಮಾಡುವಂತಹ ಪೋಸ್ಟ್ ನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ.
ಹೀಗಾಗಿ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಧ್ಯಾಹ್ನದವರೆಗೂ ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಗೆ ಹಲವು ಸಂಘ ಸಂಸ್ಥೆ ಗಳು, ಆಟೋ ಚಾಲಕರ ಸಂಘ, ಕೊಡಗು ಹೋಮ್ ಸ್ಟೇ ಅಸೋಸಿಯೇಷನ್, ಕೊಡಗು ಜಿಲ್ಲೆ ಟ್ರಾವೆಲ್ ಅಸೋಸಿಯೇಷನ್ ಹಾಗೂ ಜಿಲ್ಲಾ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಬೆಂಬಲ ನೀಡಿವೆ.
ವೀರಸೇನಾನಿಗಳಿಗೆ ಅಪಮಾನದ ಬಳಿಕ ವಿದ್ಯಾಧರ್ ಅವರನ್ನು ನಂವೆಂಬರ್ 22ರಂದು ತಡರಾತ್ರಿ ಕೊಡಗು ಪೊಲೀಸರು ಬಂಧಿಸಿ ನ್ಯಾಯಾಲಯದ ಎದುರು ಹಾಜರು ಪಡಿಸಿದ್ದರು. ಸದ್ಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.