ಬೆಂಗಳೂರು: ಕನ್ನಡ ಪರ ಸಂಘಟನೆಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನವೇ ಕರ್ನಾಟಕ ಬಂದ್ (Karnataka Bandh) ಗೆ ಕರೆ ನೀಡಿದ್ದು, ಪೋಷಕರು ಹಾಗೂ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಬಂದ್ ದಿನ ಪರೀಕ್ಷೆ (Exam) ಇದೇ. ಇದೇ ದಿನ ಬಂದ್ ಗೆ ಕರೆ ನೀಡಲಾಗಿದೆ. ಆದರೂ ಶಿಕ್ಷಣ ಇಲಾಖೆ (Education Department) ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದರಿಂದಾಗಿ ಪಾಲಕರು ಹಾಗೂ ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ.
ಅಲ್ಲದೇ, 1 ರಿಂದ 3ನೇ ತರಗತಿಗೆ ನಲಿ-ಕಲಿ ಮೌಲ್ಯಮಾಪನ, 4 ರಿಂದ 5ನೇ ತರಗತಿಗೆ ಗಣಿತ ವಿಷಯಗಳ ಪರೀಕ್ಷೆ, 6 ರಿಂದ 8ನೇ ತರಗತಿಗೆ ಗಣಿತ ವಿಷಯಗಳ ಪರೀಕ್ಷೆ ನಡೆಯಲಿದೆ. ಅಲ್ಲದೇ, ಬಂದ್ ದಿನ ಸಾರಿಗೆ ಸಮಸ್ಯೆಯಾಗುವ ಸಾಧ್ಯತೆ ಕೂಡ ಇದೆ. ಹೀಗಾಗಿ ಸರಿಯಾದ ನಿರ್ಧಾರ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಪಾಲಕರು ಆಗ್ರಹಿಸುತ್ತಿದ್ದಾರೆ.