ಕಲಬುರಗಿ: ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಕಲಬುರಗಿ ಬಂದ್ ಗೆ ಕರೆ ನೀಡಲಾಗಿದೆ.
ಅಂಬೇಡ್ಕರ್ ಅಂತಾ ಹೇಳುವುದು ಕೆಲವರಿಗೆ ಫ್ಯಾಷನ್ ಆಗಿದೆ. ಅಂಬೇಡ್ಕರ್ ಹೆಸರು ಹೇಳುವುದು ಬಿಟ್ಟು ದೇವರ ಹೆಸರನ್ನಾದರೂ ಹೇಳಿದ್ದರೆ, ಪುಣ್ಯ ಬರುತ್ತಿತ್ತು ಎಂದು ಹೇಳಿರುವ ಮಾತು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ.
ಬಂದ್ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜಿಗೆ ಡಿಡಿಪಿಐ ಸೂರ್ಯಕಾಂತ್ ರಜೆ ಘೋಷಿಸಿದ್ದಾರೆ. ನಾಳೆ ಮದ್ಯ ಮಾರಾಟ ಕೂಡ ನಿಷೇಧಿಸಲಾಗಿದೆ.