ಬೆಂಗಳೂರು: ಬೆಲೆ ಏರಿಕೆ ಮಾಡಿದ ದಿನದಿಂದಲೂ ನಮ್ಮ ಮೆಟ್ರೋ ಪ್ರಯಾಣಿಕರು ಮೌನ ಪ್ರತಿಭಟನೆ ನಡೆಸಿದ್ದಾರೆ. ಹಲವರಂತೂ ಇಂದಿಗೂ ಮೆಟ್ರೋದತ್ತ ಸುಳಿಯುತ್ತಿಲ್ಲ. ಮೆಟ್ರೋ ಸಹವಾಸವೇ ಬೇಡ ಅಂತಾ ಹಲವರು ಅನ್ಯ ಮಾರ್ಗ ಹುಡುಕಿದ್ದಾರೆ. ಹೀಗಾಗಿ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ.
ಫೆಬ್ರವರಿ 9 ರಂದು ರಾಜ್ಯ ಸರ್ಕಾರ ನಮ್ಮ ಮೆಟ್ರೋ ಪ್ರಯಾಣ ದರವನ್ನು ಏರಿಕೆ ಮಾಡಿದ್ದೇ ಮಾಡಿದ್ದು, ಸದ್ಯ ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿದಿದೆ. ಕಳೆದೊಂದು ತಿಂಗಳಲ್ಲೇ 4.5 ಲಕ್ಷ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗಿದ್ದು, ಇದಕ್ಕೆ ರಾಜ್ಯ ಸರ್ಕಾರ ದರ ಏರಿಕೆ ಮಾಡಿರುವುದೇ ಕಾರಣ ಎನ್ನಲಾಗಿದೆ.