ಬೆಂಗಳೂರು: ದೇಶದ ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಪ್ರಮುಖವಾಗಿರುವ ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಒಳ್ಳೆಯ ಅವಕಾಶ ದೊರೆತಿದೆ. ಹೌದು, ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ 3,500 ಹುದ್ದೆಗಳ (Canara Bank Recruitment 2025) ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹರು ಹಾಗೂ ಆಸಕ್ತಿ ಹೊಂದಿದವರು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ನೇಮಕಾತಿ ಸಂಸ್ಥೆ: ಕೆನರಾ ಬ್ಯಾಂಕ್
ಒಟ್ಟು ಹುದ್ದೆಗಳು: 3,500
ಹುದ್ದೆಗಳ ಹೆಸರು: ಅಪ್ರೆಂಟಿಸ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 12
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು www.nats.education.gov.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಕೌಶಲ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಕನಿಷ್ಠ 20ರಿಂದ 28 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಉಳಿದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.