ಕೋಲಾರ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಾಲೂರು ತಾಲ್ಲೂಕಿನ ಭಾವನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಗರ್ಭಿಣಿ (Pregnant) ಅರ್ಚನಾ (25) ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಪತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ವೇಗವಾಗಿ ಚಲಿಸುತ್ತಿದ್ದ ವೇಳೆ ಚಾಲಕನ ನಿರ್ಲಕ್ಷ್ಯದಿಂದಾಗಿ ರಸ್ತೆ ಬದಿಯಲ್ಲಿದ್ದ ಮಾವಿನ ಮರಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಮಾಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.