ಹೊನ್ನಾವರ: ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು ಹೊತ್ತಿ ಉರಿದ ಪರಿಣಾಮ ಇಬ್ಬರು ಸಜೀವ ದಹನವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ನಲ್ಲಿ ನಡೆದಿದೆ.
ಕಾರು ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿರುವ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬಂದಿದ್ದು, ಕಾರಿನ ನಂಬರ್ಪ್ಲೇಟ್ ಕೂಡ ಬೆಂಕಿಯಲ್ಲಿ ಸುಟ್ಟುಹೋಗಿದೆ. ಹೀಗಾಗಿ ಕಾರು ಮತ್ತು ಕಾರಿನಲ್ಲಿ ಇದ್ದವರ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಮೃತರು ಸಿದ್ದಾಪುರ ಮೂಲದವರೆಂದು ಗೊತ್ತಾಗಿದ್ದು, ಘಟನೆ ಬಗ್ಗೆ ಸಂಬಂಧಿಕರಿಗೆ ಮಾಹಿತಿ ರವಾನೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಈ ಘಟನಾ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; ಚಿತ್ರದುರ್ಗದಲ್ಲಿ ಭೀಕರ ಅಪಘಾತ | ಮರಕ್ಕೆ ಬೊಲೆರೊ ವಾಹನ ಡಿಕ್ಕಿ : ನಾಲ್ವರು ದುರ್ಮರಣ



















