ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕಗಳನ್ನು ಗೆದ್ದಿರುವ ಭಾರತದ ಶೂಟರ್ ಇತ್ತೀಚೆಗೆ ಖೇಲ್ ರತ್ನ ಪ್ರಶಸ್ತಿಗಳನ್ನು ಸ್ವೀಕರಿಸಿ ಸಂತಸದಲ್ಲಿದ್ದರು. ಈ ನಡುವೆ ಅವರು ವೈಯಕ್ತಿಕ ಆಘಾತವೊಂದು ಎದುರಾಗಿದೆ. ಅವರ ಚಿಕ್ಕಪ್ಪ ಮತ್ತು ಅಜ್ಜಿ ರಸ್ತೆ ಅಪಘಾತವೊಂದರಲ್ಲಿ ದುರಂತ ಸಾವು ಕಂಡಿದ್ದಾರೆ. ಈ ಘಟನೆ ಹರಿಯಾಣದಲ್ಲಿ ನಡೆದಿದೆ.
ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ ಕೇವಲ ಎರಡು ದಿನಗಳ ಅಂತರದಲ್ಲಿ ಚಿಕ್ಕಪ್ಪ ಮತ್ತು ಅಜ್ಜಿ ಮಾರಣಾಂತಿಕ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಮನು ಭಾಕರ್ ಅವರ ಚಿಕ್ಕಪ್ಪ ಯುದ್ಧವೀರ್ ಸಿಂಗ್ ಮತ್ತು ಅಜ್ಜಿ ಸಾವಿತ್ರಿ ದೇವಿ ಅವರು ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಮಹೇಂದರ್‌ಗಢ ಬೈಪಾಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ವರದಿಗಳ ಪ್ರಕಾರ, ರಾಂಗ್ ಸೈಡ್‌ನಿಂದ ವೇಗವಾಗಿ ಬಂದ ಬ್ರೆಝಾ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಇಬ್ಬರು ನೆಲಕ್ಕೆ ಬಿದ್ದ ತಕ್ಷಣ ಸ್ಥಳದಲ್ಲೇ ಸಾವನ್ನಪ್ಪಿದರು.