ಹಾವೇರಿ: ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾವೇರಿ (Haveri) ಜಿಲ್ಲೆ ಬ್ಯಾಡಗಿ (Byadagi) ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಘಟನೆ ಕುರಿತು ಹಾವೇರಿ ಎಸ್ಪಿ ಅಂಶುಕುಮಾರ್ ಪ್ರತಿಕ್ರಿಯಿಸಿದ್ದು, ಎನ್ಹೆಚ್ 4 ಹೆದ್ದಾರಿಯಲ್ಲಿ ಅಪಘಾತ ಆಗಿದೆ. ಲಾರಿಗೆ ಹಿಂಬದಿಯಿಂದ ಹೋಗಿ ಕಾರು ಗುದ್ದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರು ರಾಣೆಬೆನ್ನೂರು ನಗರದ ಅಶೋಕ್ ನಗರದ ನಿವಾಸಿಗಳು ಎನ್ನಲಾಗಿದೆ.