ಚಿಕ್ಕಬಳ್ಳಾಪುರ : ಕಾರೊಂದು ಲಾರಿಗೆ ಡಿಕ್ಕಿಯಾದ ಪರಿಣಾಮ ನವವಿವಾಹಿತೆ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಶೆಟ್ಟಿಗೆರೆ ಕ್ರಾಸ್ ಬಳಿ ಸಂಭವಿಸಿದೆ.
ರಕ್ಷಿತಾ ರೆಡ್ಡಿ (23) ಹಾಗೂ ಪವನ್ ರೆಡ್ಡಿ (30) ಮೃತಪಟ್ಟಿದ್ದು, ಪತಿ ರಾಜಶೇಖರ್ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದಂಪತಿಗಳಿಬ್ಬರು ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜನಿಯರ್ ಆಗಿದ್ದರು ಎಂದು ತಿಳಿದುಬಂದಿದೆ.

ಟೆಕ್ಕಿ ದಂಪತಿ ಕಳೆದ ನವೆಂಬರ್‌ನಲ್ಲಷ್ಟೇ ವಿವಾಹವಾಗಿದ್ದರು. ಇಬ್ಬರು ತಮ್ಮ ಸಂಬಂಧಿ ಪವನ್ ರೆಡ್ಡಿ ಜೊತೆ ಕಾರಿನಲ್ಲಿ ಅನಂತಪುರದ ಸ್ವಗ್ರಾಮ ಅವಳಗಿಗೆ ತೆರಳುತ್ತಿದ್ದರು. ಈ ವೇಳೆ ಮುಂದೆ ಸಾಗುತ್ತಿದ್ದ ಕಂಟೇನರ್ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಪತ್ನಿ ಹಾಗೂ ಪವನ್ ಸಾವನ್ನಪ್ಪಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ರಾಜಶೇಖರ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನಾ ಸಂಬಂಧ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬೌನ್ಸರ್ ಜೊತೆಗಿನ ಸಂಘರ್ಷ – ಇಂಗ್ಲೆಂಡ್ ಕ್ರಿಕೆಟಿಗರಿಗೆ ಎಚ್ಚರಿಕೆಯ ನೋಟಿಸ್!


















