ಹಾಸನ : ತೆಂಗಿನಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆಓರ್ವ ಸಾವನಪ್ಪಿರುವ ಘಟನೆ ಹಾಸನದ ಅರಕಲಗೂಡು ತಾಲ್ಲೂಕಿನ, ಹಿರೇಹಳ್ಳಿ ಗ್ರಾಮದ ಬಳಿ ನಡೆದಿದೆ. ಹೊನ್ನವಳ್ಳಿ ಗ್ರಾಮದ ಭೈರ (35) ಮೃತ ವ್ಯಕ್ತಿ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಇಬ್ಬರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಸ್ವಿಫ್ಟ್ ಕಾರಿನಲ್ಲಿ ಹೊನ್ನವಳ್ಳಿಯಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾಜ್ಯ ಹೆದ್ದಾರಿಯಲ್ಲಿ ಎದುರಿನಿಂದ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರು ಡಿಕ್ಕಿ ಹೊಪಡೆದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿದೆ.
ಗಾಯಾಳುಗಳನ್ನು ಅರಕಲಗೂಡು ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರದ ದಾಖಲಾಗಿದೆ.