ರಾಮನಗರ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚನ್ನಪಟ್ಟಣ (Channapattan) ತಾಲೂಕಿನ ಅಮ್ಮಳ್ಳಿದೊಡ್ಡಿ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ. ಮಧು, ದೀಪು, ಅಭಿ ಸಾವನ್ನಪ್ಪಿರುವ ದುರ್ದೈವಿಗಳು ಎನ್ನಲಾಗಿದೆ. ಸಾವನ್ನಪ್ಪಿದವರನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯದವರು ಎನ್ನಲಾಗಿದೆ. ಅಲ್ಲದೇ, ಘಟನೆಯಲ್ಲಿ ಚಿರು ಎಂಬುವರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾರಿನಲ್ಲಿದ್ದವರು ಜಿಲ್ಲೆಯ ಕಬ್ಬಾಳು ಗ್ರಾಮಕ್ಕೆ ಹೋಗಿ ಮರಳಿ ಬೆಂಗಳೂರಿಗೆ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂ ಆಗಿದೆ. ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.