ಹಾಸನ : ಚಾಲಕನ ನಿಯಂತ್ರಣ ತಪ್ಪಿ ಕಾರು ಪ್ರಪಾತಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಮಾರಹಳ್ಳಿ ಗ್ರಾಮದ ಬಳಿ ನಡೆದಿದೆ.
ಮಗನನ್ನು ಗುರುವಾಯಿನಕೆರೆಯಲ್ಲಿರುವ ನವೋದಯ ಶಾಲೆಗೆ ಬಿಡಲು ಪತ್ನಿ ಮತ್ತು ಇಬ್ಬರ ಮಕ್ಕಳ ಜೊತೆ ಶಿವಮೊಗ್ಗ ಮೂಲದ ಗೋವಿಂದನಾಯ್ಕ್ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿದ್ದು, ಮಾರನಹಳ್ಳಿ ಬಳಿ ತಡೆಗೋಡೆಯಿಲ್ಲದೆ ಕಾರಣ 80 ಅಡಿ ಆಳಕ್ಕೆ ಬಿದ್ದಿದೆ.
ಕಾರು ಬಿದ್ದಿದ್ದನ್ನು ಕಂಡ ಸ್ಥಳೀಯರು ಹಾಗೂ ವಾಹನ ಸವಾರರು ಕೂಡಲೇ ರಕ್ಷಣೆಗೆ ಮುಂದಾಗಿದ್ದಾರೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



















