ಶಿವಮೊಗ್ಗ: ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿಯಾದ ಪರಿಣಾಮ ಮಗು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಡೆದಿದೆ.
ರಿಯಾಜ್ ಅಹಮದ್ ಹಾಗೂ ಫಾತಿಮಾ ಮೃತರು. ಮಗು, ಕಾರಿನ ಚಾಲಕ ಮತ್ತು ಪಕ್ಕದ ಸೀಟಿನಲ್ಲಿದ್ದ ಮಹಿಳೆ ಮೃತಪಟ್ಟಿದ್ದು ಕಾರಿನಲ್ಲಿದ್ದ ಉಳಿದ ಮೂವರು ಗಂಭೀರ ಗಾಯಗೊಂಡಿದ್ದಾರೆ.
ಚೆನ್ನಗಿರಿಯಿಂದ ಶೃಂಗೇರಿ ಕಡೆಗೆ ಸ್ವಿಫ್ಟ್ ಕಾರಿನಲ್ಲಿ6 ಜನರು ತೆರಳುತ್ತಿದ್ದರೆ, ಮತ್ತೊಂದೆಡೆ ಮಂಗಳೂರಿನಿಂದ ರಾಯಚೂರು ಕಡೆಗೆ ಕೆಎಸ್‌ಆರ್‌ಟಿಸಿ ಬಸ್ ಹೋಗುತ್ತಿತ್ತು. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ.
ಮೃತದೇಹ ತೀರ್ಥಹಳ್ಳಿ ತಾಲೂಕು ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಗಾಯಾಳುಗಳಿಗೆ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ಮಕ್ಕಳನ್ನ ವಾಕಿಂಗ್ ಕರೆದೊಯ್ಯುವ ಪೋಷಕರೇ ಎಚ್ಚರ | 5 ವರ್ಷದ ಮಗುವಿಗೆ ರಸ್ತೆಯಲ್ಲಿ ಹಾವು ಕಡಿತ



















