ಬೆಂಗಳೂರು: ಮಳೆಯಿಂದಾಗಿ ಇಡೀ ಬೆಂಗಳೂರು ಗುಂಡಿಮಯವಾಗಿದೆ. ಮಳೆಗಾಲಕ್ಕೂ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳದ ಹಿನ್ನೆಲೆಯಲ್ಲಿ ಎಲ್ಲೆಂದರಲ್ಲಿ ಗುಂಡಿ ಬಿದ್ದಿವೆ. ಹಲವೆಡೆ ಮಳೆಗಾಲದ ಸಂದರ್ಭದಲ್ಲೇ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಹಲವೆಡೆ ಸಾಕಷ್ಟು ಅವಂತಾರಗಳು ನಡೆಯುತ್ತಿವೆ. ಈಗ ಗುಂಡಿಯಿಂದಾಗಿ ಕಾರೊಂದು ಬಿದ್ದಿರುವ ಘಟನೆ ನಡೆದಿದೆ.
ನಿಯಂತ್ರಣ ತಪ್ಪಿದ ಪರಿಣಾಮ ಹೊಂಡಕ್ಕೆ ಕಾರು ಬಿದ್ದಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ನಲ್ಲಿ ನಡೆದಿದೆ. ಪೈಪ್ ಲೈನ್ ಕಾಮಗಾರಿ ಹಿನ್ನೆಲೆಯಲ್ಲಿ ರಸ್ತೆ ಅಗೆಯುತ್ತಿದ್ದ ವೇಳೆ ರಸ್ತೆಯಲ್ಲಿ ಬೃಹತ್ ಹೊಂಡವೊಂದು ನಿರ್ಮಾಣವಾಗಿದೆ. ಅದನ್ನು ಗಮನಿಸಿದೆ ಕಾರೊಂದು ಹೊಂಡದಲ್ಲಿ ಬಿದ್ದಿದೆ. ಆದರೆ, ಅದೃಷ್ಟವಶಾತ್ ಮಹಿಳೆಯೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಹವನ್ನು ಮಹಿಳೆಯೊಬ್ಬರು ಚಲಾಯಿಸಿಕೊಂಡು ಹೋಗುತ್ತಿದ್ದರು ಎನ್ನಲಾಗಿದೆ.