ಧಾರವಾಡ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಧಾರವಾಡದ ಬೈಪಾಸ್ ನ ಕ್ಲಾಸಿಕ್ ಸ್ಕೂಲ್ ಬಳಿ ಈ ಘಟನೆ ನಡೆದಿದೆ. ಬೆಳಗಾವಿಯಿಂದ ದಾವಣಗೆರೆ ಕಡೆಗೆ ಹೊರಟಿದ್ದ ಕಾರು ಪಲ್ಟಿಯಾಗಿದೆ. ಅತಿಯಾದ ವೇಗದಿಂದ ಆಗಮಿಸಿ, ನಿಯಂತ್ರಣ ತಪ್ಪಿದ ಪರಿಣಾಮ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ.
ಕಾರನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.