ಚಿಕ್ಕಬಳ್ಳಾಪುರ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೊತ್ತನೂರು ಗ್ರಾಮದ ಬಳಿ ನಡೆದಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ರಾಜೇಂದ್ರ ಹಾಗೂ ಭಾಗ್ಯಮ್ಮ ದಂಪತಿಯ ಮಗಳು ಅಂಕಿತಾ (9) ಮೃತ ಬಾಲಕಿ. ಈ ಕುಟುಂಬ ಹೊಸಕೋಟೆಯಲ್ಲಿ ವಾಸವಾಗಿತ್ತು. ಜಾತ್ರೆಗೆ ತೆರಳಿದ್ದ ಭಾಗ್ಯಮ್ಮ ಸಂಬಂಧಿಕ ಮಹೇಶ್ ಎಂಬವರಿಗೆ ಸೇರಿದ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಮಕ್ಕಳೊಂದಿಗೆ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ.
ಲಾರಿ ಒವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಹಾರಿ ಪಲ್ಟಿಯಾಗಿದೆ. ಈ ವೇಳೆ ಬಾಲಕಿ ಸಾವನ್ನಪ್ಪಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನಾ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಹೊರ್ಮುಜ್ ಜಲಸಂಧಿಯಲ್ಲಿ ಹೊಸ ಮಾರ್ಗ.. ಇರಾನ್ ಕಣ್ತಪ್ಪಿಸಿ ಸಾಗಿದ 4 ಬೃಹತ್ ಹಡಗುಗಳು!


















