ಬೆಂಗಳೂರು: ಆನೇಕಲ್ ತಾಲೂಕಿನ ಚಂದಾಪುರ-ದೊಮ್ಮಸಂದ್ರ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ರಿಟ್ಜ್ ಕಾರೊಂದು ರಸ್ತೆ ಬದಿಯ ಬೇಲಿಗೆ ನುಗ್ಗಿದೆ. ತಡರಾತ್ರಿ 2 ಗಂಟೆ ಸುಮಾರಿಗೆ ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ಈ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಕಾರು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳೀಯರು ತಕ್ಷಣವೇ ಆತನನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ವರ್ತೂರು ಪೊಲೀಸರು ಕ್ರೇನ್ ಮೂಲಕ ಕಾರನ್ನು ತೆರವುಗೊಳಿಸಿದ್ದಾರೆ.



















