ನವದೆಹಲಿ : ಇಂದು ದೇಶದಲ್ಲಿ 2,900 ಕೆ.ಜಿ ಸ್ಫೋಟಕಗಳು ಪತ್ತೆ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡಿದೆ. ಭೀಕರ ದುರಂತದಲ್ಲಿ (ಓರ್ವ ಸಾವು) ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಈ ಸ್ಫೋಟವು ವ್ಯಾಪಕ ಭೀತಿಯನ್ನುಂಟುಮಾಡಿದೆ.

ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಬೆಂಕಿ ನಂದಿಸಲು ಸದ್ಯ ದೆಹಲಿ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಘಟನೆಯ ಸಮಯದಲ್ಲಿ ದೊಡ್ಡ ಜನಸಮೂಹವೇ ಸ್ಥಳದಲ್ಲಿ ನೆರೆದಿತ್ತು ಎನ್ನಲಾಗಿದೆ.

ಸ್ಫೋಟದ ಪರಿಣಾಮವಾಗಿ ಹತ್ತಿರದ 10ಕ್ಕೂ ಹೆಚ್ಚು ವಾಹನಗಳಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇದರೊಂದಿಗೆ ಸ್ಪೋಟವಾದ ಕಾರಿನ ಹತ್ತಿರವಿದ್ದ ಅಂಗಡಿಯ ಬಾಗಿಲು ಮತ್ತು ಕಿಟಕಿಗಳು ಒಡೆದು ಭಾರೀ ಆತಂಕ ಸೃಸ್ಟಿಸಿದೆ. ಸ್ಫೋಟದ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ದೆಹಲಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ತಂಡಗಳು ಸ್ಥಳದಲ್ಲಿದ್ದು, ತನಿಖೆ ನಡೆಸುತ್ತಿವೆ. ಸದ್ಯ ಸ್ಥಳದಲ್ಲಿ ಭದ್ರತೆಯನ್ನು ಹೈ ಅಲರ್ಟ್ ಮಾಡಲಾಗಿದೆ.
ಇದನ್ನೂ ಓದಿ : BBK12 | ದೊಡ್ಮನೆಯಲ್ಲಿ ಧ್ರುವಂತ್‌ಗೆ ಚಳಿ ಬಿಡಿಸಿದ ಕಾವ್ಯ, ರಾಶಿಕಾ


















