ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಗರ್ಭಿಣಿಯರ ಸಾವಿನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಹೆರಿಗೆಗೆ ದಾಖಲಾಗಿದ್ದ 7 ಜನ ಗರ್ಭಿಣಿಯರು ಸಾವನ್ನಪ್ಪಿರುವ ಘಟನೆಗಳು ಈಗ ಆಕ್ರೋಶಕ್ಕೆ ಕಾರಣವಾಗುತ್ತಿವೆ.
ಐವಿ ಗ್ಲುಕೋಸ್ ಇದಕ್ಕೆ ಕಾರಣ ಎನ್ನಲಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಇಂದು ಅಧಿಕಾರಿಗಳೊಂದಿಗೆ ಸಭೆ ಮಾಡಿದ್ದು, ಖಡಕ್ ಎಚ್ಚರಿಕೆ ನಿಡಿದ್ದಾರೆ. 7 ದಿನಗಳಲ್ಲಿ ವರದಿ ನೀಡಲು ಸೂಚಿಸಿದ್ದಾರೆ. ಅಲ್ಲದೇ, ಸಾವನ್ನಪ್ಪಿರುವ ಗರ್ಭಿಣಿಯರ ಕುಟುಂಬಗಳಿಗೆ ಸರ್ಕಾರದಿಂದ ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ವೇಳೆ ಮಾತನಾಡಿದ ಸಿಎಂ, ಇಂತಹ ಘಟನೆಗಳು ಮುಂದೆ ನಡೆಯದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಎರಡು ಲಕ್ಷ ರೂ. ಪರಿಹಾರ ನೀಡಲಾಗುತ್ತಿದ್ದು, ಕಂಪನಿಯಿಂದಲೂ ಪರಿಹಾರ ಮತ್ತು ಆಸ್ಪತ್ರೆ ಎಂಡಿಗೆ ನೋಟಿಸ್ ನೀಡಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಸಿಸೇರಿಯನ್ ವೇಳೆ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಬಳ್ಳಾರಿಯಲ್ಲಿ ಸಿಸೇರಿಯನ್ ವೇಳೆ ಮೃತಪಟ್ಟ ಉದಾಹರಣೆ ಇಲ್ಲ. ಲಿಂಗರ್ ಲ್ಯಾಕ್ಟೇಟ್ ಪೂರೈಸಿದ್ದು ಬಂಗಾಳದ ಔಷಧ ಕಂಪನಿ. ಪಶ್ಚಿಮ ಬಂಗಾಳದ ಕಂಪನಿಯನ್ನ ಬ್ಲಾಕ್‌ಲಿಸ್ಟ್‌ಗೆ ಹಾಕಿದ್ದೇವೆ. ಬಳ್ಳಾರಿ ಜಿಲ್ಲಾ ಔಷಧ ನಿಯಂತ್ರಕನನ್ನು ಸಸ್ಪೆಂಡ್ ಮಾಡಲಾಗಿದೆ ಎಂದಿದ್ದಾರೆ.