ಬೆಳಗಾವಿ | ರಹಸ್ಯವಾಗಿ ಖಾಸಗಿ ಕ್ಷಣ ಸೆರೆ ಹಿಡಿದು ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಇದೀಗ ರಾಜ್ಯ ಮಹಿಳಾ ಆಯೋಗ ಎಂಟ್ರಿ ಕೊಟ್ಟಿದ್ದು, ಬೆಳಗಾವಿ ಎಸ್‌ಪಿ ಅವರಿಗೆ ಈ ಸಂಬಂಧ ಪತ್ರ ಬರೆದು ವರದಿ ನೀಡಿವಂತೆ ಸೂಚಿಸಲಾಗಿದೆ.

ಬೆಳಗಾವಿ ಎಸ್‌ಪಿ ಅವರಿಗೆ ಪತ್ರ ಬರೆದಿರುವ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು, ಪ್ರಕರಣದ ಕುರಿತು ವರದಿ ನೀಡುವಂತೆ ಸೂಚನೆ ನೀಡಿದ್ದಾರೆ. ಸರ್ಕಾರಿ ಮಹಿಳಾ ಅಧಿಕಾರಿ ಮನೆಯ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇಟ್ಟು, ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿ, ಅಧಿಕಾರಿಗೆ 50 ಲಕ್ಷ ರೂಪಾಯಿ ಬೇಡಿಕೆ ಇಟ್ಟ ಯೂಟ್ಯೂಬ್‌ನ ಮೂವರು ನಕಲಿ ಪತ್ರಕರ್ತರನ್ನು ಮಾಳಮಾರುತಿ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿರುತ್ತದೆ.

ಆದ್ದರಿಂದ ಈ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ವರದಿ ನೀಡುವಂತೆ ಸಂಬಂಧಪಟ್ಟ ಠಾಣಾಧಿಕಾರಿಯವರಿಗೆ ಸೂಚಿಸುವಂತೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ : ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ | ಮಾಲೀಕ ವಶಕ್ಕೆ



















