ಬೆಂಗಳೂರು: ರಾಜ್ಯದಲ್ಲಿ ನಿನ್ನೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಜಟಾಪಟಿ ನಡೆದಿದೆ.
ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಹಾಗೂ ಅವರಿಂದ ಅಭಿಪ್ರಾಯ ಸಂಗ್ರಹ ಮಾಡಲು ಸಿಎಂ ಸಿದ್ಧರಾಮಯ್ಯ ಕರೆದಿದ್ದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಏರುದನಿಯ ಮಾತುಗಳು ನಡೆದಿದ್ದು, ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ, ಶಿವಾನಂದ ಪಾಟೀಲ್, ಎಂ.ಬಿ.ಪಾಟೀಲ್, ಸಂತೋಷ್ ಲಾಡ್ ಮಧ್ಯೆ ವಾಗ್ವಾದ ನಡೆದಿದೆ. ಡಿಸಿಎಂ ಡಿಕೆಶಿ ಕೂಡ ಜಾತಿಗಣತಿ ವಿಚಾರದಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.