ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಚಾಲಕರ ಸಂಘದ ವತಿಯಿಂದ ವಿಜಯನಗರದಲ್ಲಿ ದಾಸಶ್ರೇಷ್ಠ ಕನಕ ಜಯಂತ್ಯೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ವಿಜಯನಗರ ಶಾಸಕ ಎಂ. ಕೃಷ್ಣಪ್ಪ, ಎಐಸಿಸಿ ಮತ್ತು ಕೆಪಿಸಿಸಿ ಕಾರ್ಯದರ್ಶಿ, ವಕ್ತಾರರು ಹಾಗೂ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ದಾಸಶ್ರೇಷ್ಠ ಕನಕದಾಸರ ಮೆರವಣಿಗೆ ಹಾಗೂ ಬೈಕ್ ರ್ಯಾಲಿ ನಡೆಯಿತು. ಬೈಕ್ ರ್ಯಾಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕನಕದಾಸರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜಾತಿ-ಧರ್ಮ ಎಂಬುವುದು ಸಮಾಜಕ್ಕೆ ಕಂಠಕವೇ ಹೊರತು, ಮಾನವನಿಗೆ ಉಪಯುಕ್ತವಲ್ಲ. ಹೀಗಾಗಿ ಪ್ರತಿಯೊಬ್ಬರೂ ಜಾತಿ-ಧರ್ಮದ ಹಂಗು ತೊರೆದು, ನಾವೆಲ್ಲ ಒಂದು ಎಂದು ಜೀವನ ಸಾಗಿಸಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ.
