ಬೆಂಗಳೂರು: ಕೇಂದ್ರ ಸರ್ಕಾರದ ಕೇಂದ್ರೀಯ ಪರೋಕ್ಷ ತೆರಿಗೆಗಳು ಹಾಗೂ ಕಸ್ಟಮ್ಸ್ ಮಂಡಳಿಯಲ್ಲಿ (CBIC Recruitment 2025) ಖಾಲಿ ಇರುವ 11 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಟ್ಯಾಕ್ಸ್ ಅಸಿಸ್ಟಂಟ್ ಹಾಗೂ ಹವಾಲ್ದಾರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 13 ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ ಹೆಸರು : ಪರೋಕ್ಷ ತೆರಿಗೆಗಳು ಹಾಗೂ ಕಸ್ಟಮ್ಸ್ ಮಂಡಳಿಯಲ್ಲಿ (CBIC)
ಹುದ್ದೆಯ ಹೆಸರು : ಟ್ಯಾಕ್ಸ್ ಅಸಿಸ್ಟಂಟ್ ಹಾಗೂ ಹವಾಲ್ದಾರ್
ಹುದ್ದೆಗಳ ಸಂಖ್ಯೆ : 11
ಉದ್ಯೋಗ ಸ್ಥಳ : ಗುವಾಹಟಿ ವಲಯ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಒಂದು ಟ್ಯಾಕ್ಸ್ ಅಸಿಸ್ಟಂಟ್ ಹಾಗೂ 10 ಹವಾಲ್ದಾರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಪಡೆದಿರಬೇಕು. ಕಂಪ್ಯೂಟರ್ ಅಪ್ಲಿಕೇಶನ್ ಗಳ ಬಗ್ಗೆ ಸಾಮಾನ್ಯ ಜ್ಞಾನ ಇರಬೇಕು. ಡೇಟಾ ಎಂಟ್ರಿಯಲ್ಲಿ ವೇಗ ಇದ್ದವರಿಗೆ ಮೊದಲ ಆದ್ಯತೆ ಎಂದು ಸಿಬಿಐಸಿ ಅಧಿಸೂಚನೆಯಲ್ಲಿ ತಿಳಿಸಿದೆ. ಸ್ಪೋರ್ಟ್ಸ್ ಕೋಟಾ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಕನಿಷ್ಠ 18ರಿಂದ 27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನರಲ್ ಕೆಟಗರಿಯವರಿಗೆ 5 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಟ್ಯಾಕ್ಸ್ ಅಸಿಸ್ಟಂಟ್ ಆಗಿ ನೇಮಕಾತಿ ಹೊಂದಿದವರಿಗೆ 81 ಸಾವಿರ ರೂಪಾಯಿವರೆಗೆ, ಹವಾಲ್ದಾರ್ ಹುದ್ದೆಗೆ ನೇಮಕಾತಿ ಹೊಂದಿದವರಿಗೆ 56 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿಗಳ ಪರಿಶೀಲನೆ ಹಾಗೂ ಕೌಶಲ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು https://cexcusner.gov.in/ ವೆಬ್ ಸೈಟ್ ಗೆ ಭೇಟಿ ನೀಡಬಹುದು.