ಬೆಂಗಳೂರು: ಇಂದಿನಿಂದ ಸಿಬಿಎಸ್ ಇ (CBSE) 10ನೇ ತರಗತಿ ಬೋರ್ಡ್ ಪರೀಕ್ಷೆ-2025 ಆರಂಭವಾಗಿದೆ. ಈಗಾಗಲೇ ಪರೀಕ್ಷೆಗಾಗಿ ವಿದ್ಯಾರ್ಥಿಗಳಿಗೆ (Students) ಮಾರ್ಗಸೂಚಿ (Guidlines) ಪ್ರಕಟಿಸಲಾಗಿದೆ. ಅವುಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.
ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ ಪಾಲಿಗೆ ಈ ಪರೀಕ್ಷೆ ನಿರ್ಣಾಯಕ ಘಟ್ಟವಾಗಿದೆ. ದೇಶದಾದ್ಯಂತ 44 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆ ಬರೆಯುತ್ತಿದ್ದಾರೆ.
ಇಂದು ವಿದ್ಯಾರ್ಥಿಗಳು ಇಂಗ್ಲಿಷ್ ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳು ಭದ್ರತಾ ಕ್ರಮಗಳು ಮತ್ತು ಪರೀಕ್ಷಾ ದಿನದ ಪ್ರೋಟೋಕಾಲ್ ಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ.
ಬೋರ್ಡ್ ಪರೀಕ್ಷೆಗಳಿಗೆ ಕಡ್ಡಾಯವಾಗಿ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರ ಧರಿಸಬೇಕು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹರಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೂಡ ಬೋರ್ಡ್ ಹೇಳಿದೆ.