ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಶಿಕ್ಷಣ ಸಂಸ್ಥೆಯಾದ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ 124 ಹುದ್ದೆಗಳ (CBSE Recruitment 2025) ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಸೆಕ್ರೆಟರಿ, ಅಸಿಸ್ಟಂಟ್ ಪ್ರೊಫೆಸರ್, ಅಕೌಂಟ್ಸ್ ಆಫೀಸರ್, ಸೂಪರಿಂಟೆಂಡೆಂಟ್ ಸೇರಿ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿ ಕುರಿತ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ
ಹುದ್ದೆಗಳ ಹೆಸರು: . ಅಸಿಸ್ಟಂಟ್ ಸೆಕ್ರೆಟರಿ, ಅಸಿಸ್ಟಂಟ್ ಪ್ರೊಫೆಸರ್, ಅಕೌಂಟ್ಸ್ ಆಫೀಸರ್ ಇತ್ಯಾದಿ
ಒಟ್ಟು ಹುದ್ದೆಗಳು: 124
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 22
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ, ಡಿಪ್ಲೋಮಾ, ಬಿ.ಕಾಂ, ಎಂಬಿಎ ಕೋರ್ಸ್ ಗಳನ್ನು ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕನಿಷ್ಠ 28ರಿಂದ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಹಿಳಾ ಅಭ್ಯರ್ಥಿಗಳಿಗೆ 250 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ 1,750 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಪೂರ್ವಭಾವಿ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ cbse.gov.in ಗೆ ಭೇಟಿ ನೀಡಬೇಕು
ನಿಮಗೆ ಹುದ್ದೆಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಬಳಿಕ ಅರ್ಜಿಯನ್ನು ಸಲ್ಲಿಸಬೇಕು
ಇದನ್ನೂ ಓದಿ: ಮೈಸೂರು ಅರಮನೆಯ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ | ತಪ್ಪಿದ ಭಾರೀ ಅನಾಹುತ



















