ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಇತ್ತೀಚೆಗಷ್ಟೇ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇಂದು ಏಕಾಏಕಿ ಮತ್ತೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಹಲವು ವಸ್ತುಗಳು ಪತ್ತೆಯಾಗಿವೆ ಎನ್ನಲಾಗಿದೆ. ಬ್ಯಾರಕ್ ಗಳಲ್ಲಿ ಪರಿಶೀಲನೆ ನಡೆಸಿದಾಗ ಬೀಡಿ, ಸಿಗರೇಟ್, ಗಾಂಜಾ ಸೇದುವ ಪೈಪ್ ಸೇರಿದಂತೆ ನಗದು ಹಣ ಪತ್ತೆಯಾಗಿದೆ. ಈ ಹಿಂದೆ ಆಗ್ನೇಯ ವಿಭಾಗ ಪೊಲೀಸರು ದಾಳಿ ನಡೆಸಿದ್ದರು.