ಬೆಂಗಳೂರು: ಕಾನೂನಿನ ಅವಧಿ ಮೀರಿ ಪಾರ್ಟಿ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಟಿತ ಹೋಟೆಲ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.
ಇಲ್ಲಿಯ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿರುವ jW Marriott ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಸಿಸಿಬಿ ಎಸಿಪಿ ಮಹಾನಂದ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.