ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (CCI Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಫೀಲ್ಡ್ ಅಸಿಸ್ಟಂಟ್ ಹಾಗೂ ಆಫೀಸ್ ಕ್ಲರ್ಕ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ನಡೆಯುತ್ತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
ಒಟ್ಟು ಹುದ್ದೆಗಳು: ವಿವಿಧ
ನೇಮಕಾತಿ ವಿಧಾನ: ಸಂದರ್ಶನ
ಸಂದರ್ಶನ ದಿನಾಂಕ: ಸೆಪ್ಟೆಂಬರ್ 18
ಉದ್ಯೋಗ ಸ್ಥಳ: ಹುಬ್ಬಳ್ಳಿ
ಬಿಎಸ್ಸಿ ಅಥವಾ ಬಿ.ಕಾಂ ಪದವಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ನಿಗದಿಪಡಿಸಿಲ್ಲ. ಒಬಿಸಿ ಸಮುದಾಯದವರಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 37 ಸಾವಿರ ರೂಪಾಯಿವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ https://cotcorp.org.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ವಿಭಾಗದಲ್ಲಿ ಫೀಲ್ಡ್ ಅಸಿಸ್ಟಂಟ್, ಆಫೀಸ್ ಕ್ಲರ್ಕ್ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಪ್ರತಿ, ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನ ನಡೆಯುವ ಸ್ಥಳ
Deputy General Manager, The Cotton Corporation of India Limited, 3rd Floor, W.B. Plaza, Opp. North Traffic Police Station, New Cotton Market, Hubli-580029