ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸೆಂಟರ್ ಫಾರ್ ಡೆವಲಪ್ ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ಸಂಸ್ಥೆಯಲ್ಲಿ 60 ಹುದ್ದೆಗಳು ಖಾಲಿ (CDAC Recruitment 2026) ಇದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವಿರ ಈ ಕೆಳಗಿನಂತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆಯ ಹೆಸರು : ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ( CDAC )
ಒಟ್ಟು ಹುದ್ದೆಗಳ ಸಂಖ್ಯೆ: 60
ಉದ್ಯೋಗ ಸ್ಥಳ: ದೇಶಾದ್ಯಂತ
ಹುದ್ದೆ ಹೆಸರು: ಪ್ರಾಜೆಕ್ಟ್ ಎಂಜಿನಿಯರ್ ಇತ್ಯಾದಿ
ವಾರ್ಷಿಕ ಸಂಬಳದ ಪ್ಯಾಕೇಜ್: 7.11 ಲಕ್ಷ ರೂಪಾಯಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜನವರಿ 31
ಕಮ್ಯುನಿಕೇಷನ್ ಎಂಜಿನಿಯರ್, ಪ್ರಾಜೆಕ್ಟ್ ಎಂಜಿನಿಯರ್ ಸೇರಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಬಿ.ಟೆಕ್, ಬಿಇ, ಎಂ.ಇ, ಎಂ.ಟೆಕ್, ಪಿಎಚ್.ಡಿ ಸೇರಿ ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಒಬಿಸಿಯವರಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಗರಿಷ್ಠ 45 ವರ್ಷಗಳ ವಯೋಮಿತಿ ನಿಗಿದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು cdac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ನಂತರ ಅಭ್ಯರ್ಥಿಗಳ ಸಂದರ್ಶನ ಮಾಡಲಾಗುತ್ತದೆ. ದಾಖಲೆ ಪರಿಶೀಲನೆಯ ನಂತರ ನೇಮಕಾತಿ ಆದೇಶ ನೀಡಲಾಗುತ್ತದೆ.
ಇದನ್ನೂ ಓದಿ: ಎಕ್ಸಿಮ್ ಬ್ಯಾಂಕಿನಲ್ಲಿ 60 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ | 85 ಸಾವಿರ ರೂ. ಸಂಬಳ



















