ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸೆಂಟರ್ ಫಾರ್ ಡೆವಲಪ್ ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (CDAC Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 951 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಾಜೆಕ್ಟ್ ಎಂಜಿನಿಯರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸೆಂಟರ್ ಫಾರ್ ಡೆವಲಪ್ ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (CDAC)
ಒಟ್ಟು ಹುದ್ದೆ: 951
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ದೇಶಾದ್ಯಂತ
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಎಂಜಿನಿಯರ್ ಇತ್ಯಾದಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 20
115 ಪ್ರಾಜೆಕ್ಟ್ ಅಸೋಸಿಯೇಟ್, 389 ಪ್ರಾಜೆಕ್ಟ್ ಎಂಜಿನಿಯರ್, 210 ಪ್ರಾಜೆಕ್ಟ್ ಮ್ಯಾನೇಜರ್, 200 ಸೀನಿಯರ್ ಪ್ರಾಜೆಕ್ಟ್ ಎಂಜಿನಿಯರ್, 32 ಪ್ರಾಜೆಕ್ಟ್ ಟೆಕ್ನಿಶಿಯನ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ವರ್ಷಕ್ಕೆ 3 ಲಕ್ಷ ರೂ.ನಿಂದ 22 ಲಕ್ಷ ರೂ.ವರೆಗೆ ಸಂಬಳದ ಪ್ಯಾಕೇಜ್ ನೀಡಲಾಗುತ್ತದೆ. ಬೆಂಗಳೂರಿನಲ್ಲಿಯೇ 272 ಹುದ್ದೆಗಳು ಖಾಲಿ ಇವೆ.
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್, ಎಂಬಿಎ, ಎಂಎ, ಪಿಎಚ್.ಡಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 56 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ನಂತರ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು cdac.in ಗೆ ಭೇಟಿ ನೀಡಬಹುದು.


















