ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ 34 ಹುದ್ದೆಗಳ ನೇಮಕಾತಿಗಾಗಿ (CEL Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಡೆಪ್ಯೂಟಿ ಜನರಲ್ ಮ್ಯಾನೇಜರ್ ಹಾಗೂ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸೆಂಟ್ರಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆ
ಹುದ್ದೆಗಳ ಹೆಸರು: ಡೆಪ್ಯೂಟಿ ಜನರಲ್ ಮ್ಯಾನೇಜರ್ ಹಾಗೂ ಎಂಜಿನಿಯರ್
ಒಟ್ಟು ಹುದ್ದೆಗಳು: 34
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 03
ಕರ್ನಾಟಕದ ಬೆಂಗಳೂರು ಹಾಗೂ ತೆಲಂಗಾಣದ ಹೈದರಾಬಾದ್ ನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಸಿಎ, ಬಿ.ಇ, ಬಿ.ಟೆಕ್, ಎಂಎ, ಎಂಬಿಎ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಡೆಪ್ಯೂಟಿ ಜನರಲ್ ಮ್ಯಾನೇಜರ್, ಡೆಪ್ಯೂಟಿ ಎಂಜಿನಿಯರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ celindia.co.in ಗೆ ಭೇಟಿ ನೀಡಿ
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿ
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಂಡಿರಿ
ಇದನ್ನೂ ಓದಿ : 8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು



















