ನಟ ಶಿವರಾಜ್ ಕುಮಾರ್ ಅವರು ಶಸ್ತ್ರ ಚಿಕಿತ್ಸೆಗೆಂದು ಇಂದು ಅಮೆರಿಕಕ್ಕೆ ತೆರಳುತ್ತಿದ್ದು, ಸೆಲೆಬ್ರಿಟಿಗಳು ಇಂದು ಅವರ ಕುಶಲೋಪರಿ ವಿಚಾರಿಸಿದ್ದಾರೆ.
ಸುದೀಪ್, ಎಂ.ಬಿ. ಪಾಟೀಲ್, ವಿನೋದ್ ರಾಜ್ ಸೇರಿದಂತೆ ಹಲವು ಗಣ್ಯರು ಶಿವಣ್ಣ ಅವರನ್ನು ಭೇಟಿಯಾಗಿ ಶುಭ ಹಾರೈಸಿದ್ದಾರೆ.
ಕಿಚ್ಚ ಸುದೀಪ್ ಶಿವಣ್ಣ ನಿವಾಸಕ್ಕೆ ತೆರಳಿ ಶುಭ ಹಾರೈಸಿದ್ದಾರೆ. ಅಲ್ಲದೇ, ಈ ವೇಳೆ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ. ಮಾಜಿ ಸಚಿವ, ನಟ ಬಿಸಿ ಪಾಟೀಲ್ ಸಹ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅವರಿಗೆ ಹೂಗುಚ್ಛ ನೀಡಿ ಶೀಘ್ರ ಗುಣಮುಖವಾಗಿ ಮರಳುವಂತೆ ಶುಭ ಹಾರೈಸಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರು ಸಹ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಶುಭ ಹಾರೈಸಿದ್ದಾರೆ. ನಟ ವಿನೋದ್ ರಾಜ್ ಕುಮಾರ್ ಅವರು ಕೂಡ ನಿವಾಸಕ್ಕೆ ತೆರಳಿ ಕೆಲವು ಹೊತ್ತು ಮಾತುಕತೆ ನಡೆಸಿದ್ದಾರೆ. ವಿನೋದ್ ತಮ್ಮ ತೋಟದಿಂದ ಹಣ್ಣು-ತರಕಾರಿಗಳನ್ನು ಶಿವಣ್ಣ ಅವರಿಗೆ ನೀಡಿ ಕುಶಲೋಪರಿ ವಿಚಾರಿಸಿದ್ದಾರೆ.
ಶಿವರಾಜ್ ಕುಮಾರ್ ಪತ್ನಿ ಹಾಗೂ ಮಗಳೊಂದಿಗೆ ಇಂದು ಆಸ್ಪತ್ರೆಗೆ ತೆರಳಲಿದ್ದಾರೆ.
ಶಿವಣ್ಣ ಕುಶಲೋಪರಿ ವಿಚಾರಿಸಿದ ಸೆಲೆಬ್ರಿಟಿಗಳು
ನಟ ಶಿವರಾಜ್ ಕುಮಾರ್ ಅವರು ಶಸ್ತ್ರ ಚಿಕಿತ್ಸೆಗೆಂದು ಇಂದು ಅಮೆರಿಕಕ್ಕೆ ತೆರಳುತ್ತಿದ್ದು, ಸೆಲೆಬ್ರಿಟಿಗಳು ಇಂದು ಅವರ ಕುಶಲೋಪರಿ ವಿಚಾರಿಸಿದ್ದಾರೆ.
ಸುದೀಪ್, ಎಂ.ಬಿ. ಪಾಟೀಲ್, ವಿನೋದ್ ರಾಜ್ ಸೇರಿದಂತೆ ಹಲವು ಗಣ್ಯರು ಶಿವಣ್ಣ ಅವರನ್ನು ಭೇಟಿಯಾಗಿ ಶುಭ ಹಾರೈಸಿದ್ದಾರೆ.ಕಿಚ್ಚ ಸುದೀಪ್ ಶಿವಣ್ಣ ನಿವಾಸಕ್ಕೆ ತೆರಳಿ ಶುಭ ಹಾರೈಸಿದ್ದಾರೆ. ಅಲ್ಲದೇ, ಈ ವೇಳೆ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.
ಮಾಜಿ ಸಚಿವ, ನಟ ಬಿಸಿ ಪಾಟೀಲ್ ಸಹ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅವರಿಗೆ ಹೂಗುಚ್ಛ ನೀಡಿ ಶೀಘ್ರ ಗುಣಮುಖವಾಗಿ ಮರಳುವಂತೆ ಶುಭ ಹಾರೈಸಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರು ಸಹ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಶುಭ ಹಾರೈಸಿದ್ದಾರೆ.
ನಟ ವಿನೋದ್ ರಾಜ್ ಕುಮಾರ್ ಅವರು ಕೂಡ ನಿವಾಸಕ್ಕೆ ತೆರಳಿ ಕೆಲವು ಹೊತ್ತು ಮಾತುಕತೆ ನಡೆಸಿದ್ದಾರೆ. ವಿನೋದ್ ತಮ್ಮ ತೋಟದಿಂದ ಹಣ್ಣು-ತರಕಾರಿಗಳನ್ನು ಶಿವಣ್ಣ ಅವರಿಗೆ ನೀಡಿ ಕುಶಲೋಪರಿ ವಿಚಾರಿಸಿದ್ದಾರೆ.
ಶಿವರಾಜ್ ಕುಮಾರ್ ಪತ್ನಿ ಹಾಗೂ ಮಗಳೊಂದಿಗೆ ಇಂದು ಆಸ್ಪತ್ರೆಗೆ ತೆರಳಲಿದ್ದಾರೆ.