ಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (Central Bank of India Recruitment 2026) ಖಾಲಿ ಇರುವ 4,500 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ಫ್ರೆಶರ್ ಗಳಿಗೆ ವೃತ್ತಿ ತರಬೇತಿ ಪಡೆಯಲು ಒಳ್ಳೆಯ ಅವಕಾಶವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳು: 4,500
ಹುದ್ದೆಗಳ ಹೆಸರು: ಅಪ್ರೆಂಟಿಸ್
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 22
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 20 ವರ್ಷಗಳಿಂದ ಗರಿಷ್ಠ 28 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಕರ್ನಾಟಕ ಸೇರಿ ದೇಶಾದ್ಯಂತ ಇರುವ ಬ್ರ್ಯಾಂಚ್ ಗಳಲ್ಲಿ ನೇಮಕಾತಿ ನಡೆಯುತ್ತಿದೆ. ಕರ್ನಾಟಕದಲ್ಲಿ 105 ಹುದ್ದೆಗಳು ಖಾಲಿ ಇವೆ. ಒಂದು ವರ್ಷದ ಅವಧಿಗೆ ವೃತ್ತಿ ತರಬೇತಿ ನೀಡಲಾಗುತ್ತದೆ. ಮಾಸಿಕ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಬಳಿಕ ಲಿಖಿತ ಪರೀಕ್ಷೆ ಹಾಗೂ ಸ್ಥಳೀಯ ಭಾಷಾ ಪರಿಣತಿ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ಸಮುದಾಯದವರಿಗೆ ಮಾಸಿಕ 800 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ 200 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ centralbankofindia.co.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು
ಇದನ್ನೂ ಓದಿ : ಪತಿಯ ಕ್ರೌರ್ಯ : ಕುತ್ತಿಗೆಗೆ ಬಿಗಿದಿದ್ದ ಸರಪಳಿ ಸಮೇತ 6 ಕಿ.ಮೀ ನಡೆದು ಪೊಲೀಸ್ ಠಾಣೆ ತಲುಪಿದ ಪತ್ನಿ!



















