ಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (Central Bank of India Recruitment 2026) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೂಪರ್ ವೈಸರ್ ಸೇರಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳು: ವಿವಿಧ
ಹುದ್ದೆಗಳ ಹೆಸರು: ಸೂಪರ್ ವೈಸರ್ ಇತ್ಯಾದಿ
ಉದ್ಯೋಗ ಸ್ಥಳ: ದೇಶದ ಹಲವೆಡೆ
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 20
ಅಟೆಂಡರ್, ವಾಚ್ ಮನ್, ಗಾರ್ಡ್ ನರ್, ಕೌನ್ಸೆಲರ್, ಬಿಸಿ ಸೂಪರ್ ವೈಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಪಶ್ಚಿಮ ಬಂಗಾಳ, ಉತ್ತರ ಪ್ರದೇಶದ ಆಗ್ರಾ, ಮಹಾರಾಷ್ಟ್ರದ ಧುಲೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪದವಿ, ಬಿ.ಇ, ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ವೈಯಕ್ತಿಕ ಸಂದರ್ಶನಕ್ಕೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 65 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 25 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ centralbankofindia.co.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅರ್ಜಿ ಸಮೇತ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸಗಳು
Watchman and Gardner Posts: Regional Manager Central Bank of India, Regional Office 7, Civil Lines, University Road, Sagar, Madhya Pradesh – 470001
Counselor-FLC: Regional Manager Central Bank of India, Regional Office 37/2/4, 1st Floor, Sanjay Place, Agra, Uttar Pradesh
BC Supervisor: Agriculture & Social Banking Dept., Central Bank of India, Regional Office Coochbehar, Bangchatra Road, Coochbehar,West Bengal-736101
FLC Counselor (Dhule): CENT FLC– Dhule on contract” to ‘Regional Head, Central Bank of India, Regional Office, P-63, MIDC, Near Glenmark Company Satpur, Nashik-42200
ಇದನ್ನೂ ಓದಿ : ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 7 ಕಾರ್ಮಿಕರು ಸಾವು.. ನಾಲ್ವರಿಗೆ ಗಾಯ!



















